
ಅಂತರರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್ ಹಾಗೂ ಬೇಡಿಕೆಯಿಂದಾಗಿ ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 85 ರೂಪಾಯಿ ಇಳಿಕೆಯಾಗಿ 14,040 ರೂಪಾಯಿಗೆ ತಲುಪಿದೆ.
24 ಕ್ಯಾರಟ್ ಶುದ್ಧ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 92 ರೂಪಾಯಿ ಕುಸಿತ ಕಂಡು 15,317 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.