
ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಕೇಂದ್ರ ಸಚಿವರು ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದು, ಸಮಸ್ಯೆಗಳ ಪರಿಹಾರಕ್ಕೆ ಒಂದು ವಾರದೊಳಗೆ ಜಂಟಿ ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲದ್ ಜೋಶಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಎಫ್ಆರ್ಪಿ, ಎಸ್ಎಪಿ ಮತ್ತು ಎಥೆನಾಲ್ ಕುರಿತು ವಿಸ್ತೃತ ಚರ್ಚೆ ನಡೆದಿದೆ.
ಸಕ್ಕರೆ ಇಳುವರಿ ಅಂಕಿ-ಅಂಶಗಳ ವ್ಯತ್ಯಾಸ, ತೂಕ ಕಡಿತ ಮತ್ತು ಕಾರ್ಖಾನೆಗಳ ವಂಚನೆ ತಡೆಯಲು ಈ ಜಂಟಿ ಸಮಿತಿಯಲ್ಲಿ ರೈತರು ಹಾಗೂ ಕೃಷಿ ವಿಜ್ಞಾನಿಗಳನ್ನು ಸೇರಿಸಲಾಗುವುದು ಎಂದು ತಿಳಿಸಲಾಗಿದೆ.