
ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್‌ನ ಬೌವಾದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಿನ್ನದ ಗಣಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಕನಿಷ್ಠ 100 ಮಂದಿ ಮೃತಪಟ್ಟಿದ್ದಾರೆ.
ಮಂಗಳವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ಗಣಿಗಾರಿಕೆ ವೇಳೆ ಸುರಂಗಗಳು ಕುಸಿದಿದ್ದೇ ದುರಂತಕ್ಕೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳೀಯ ಪಬ್ಲಿಕ್ ಪ್ರಾಸಿಕ್ಯೂಟರ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಿದೆ.