
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಮುಂದುವರಿದಿದ್ದು, ಹವಾಮಾನ ಇಲಾಖೆಯು ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನಾಳೆಯಿಂದ ಅಕ್ಟೋಬರ್ 23ರವರೆಗೆ ಎಲ್ಲೊ ಅಲರ್ಟ್ ಇರಲಿದ್ದು, ಕರಾವಳಿ ಭಾಗದಲ್ಲಿ ಅಕ್ಟೋಬರ್ 19ರವರೆಗೆ ಯೆಲ್ಲೊ ಅಲರ್ಟ್ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.
ರಾಜ್ಯದ ನಿರ್ದಿಷ್ಟ ಪ್ರದೇಶಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಐಎಂಡಿ ಕೋರಿದೆ.