
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದ್ದು, ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಹೈಕಮಾಂಡ್ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಪಕ್ಷದ ಹೆಸರನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಲಾಭ ಪಡೆಯುತ್ತಿರುವವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿರುವ ನಿಷ್ಠಾವಂತ ಕಾರ್ಯಕರ್ತರು, ಭ್ರಷ್ಟಾಚಾರದ ಆರೋಪ ಹೊತ್ತವರನ್ನು ಸಚಿವರನ್ನಾಗಿ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯದಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಲಿದೆ ಎಂದು ಎಚ್ಚರಿಸಿರುವ ಕಾರ್ಯಕರ್ತರು, ಜಾತಿ ಮತ್ತು ಹಣದ ಪ್ರಭಾವಕ್ಕೆ ಬ್ರೇಕ್ ಹಾಕುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದ್ದಾರೆ.