Indian Politics
ಪತ್ನಿಯ ಮೇಲೆ ದರ್ಪ ಮೆರೆಯುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಪತ್ನಿಯ ಮೇಲೆ ದರ್ಪ ಮೆರೆಯುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

tv9kannada2h
THE BRIEF
1

ಪತ್ನಿ ಮನೆಗೆಲಸ ಮಾಡಲೇಬೇಕೆಂದು ಅಥವಾ ಪೋಷಕರನ್ನು ನೋಡಿಕೊಳ್ಳಬೇಕೆಂದು ಪತಿ ಬಲವಂತ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಚಿಲ್ಲಾಕೂರ್ ಸುಮಲತಾ ಅವರಿದ್ದ ಪೀಠ ಮಹತ್ವದ ತೀರ್ಪು ನೀಡಿದೆ.

2

ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ ನೀಡುವಂತೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

3

ವಿವಾಹವು ವೈಯಕ್ತಿಕ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಪರವಾನಗಿ ಅಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಮಹಿಳೆಗೆ ತನ್ನ ವೃತ್ತಿಜೀವನ ಮತ್ತು ತವರು ಮನೆಗೆ ಭೇಟಿ ನೀಡುವ ಮೂಲಭೂತ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ.