
ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಅನ್ನು ರೈತರು ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ-ಧಾರವಾಡ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾರಣದಿಂದಾಗಿ ಆ ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳು ಸೇವೆ ಮಾಡಿದ ರೈತರು, ಪೊರಕೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.