
ಮಂಡ್ಯ ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ 4 ಇಸಿಎಂಪಿ ಕಿಟ್ಸ್ ಒಳಗೊಂಡ ಆಧಾರ್ ಸೇವಾ ಕೇಂದ್ರವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರೆದ ಪತ್ರಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ಈ ಹೊಸ ಕೇಂದ್ರದ ಸ್ಥಾಪನೆಯ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಈ ಕೇಂದ್ರದ ಸ್ಥಾಪನೆಯಿಂದ ಮಂಡ್ಯ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಆಧಾರ್ ನೋಂದಣಿ ಹಾಗೂ ಮಾಹಿತಿ ನವೀಕರಣ ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗಲಿದೆ.