
ಓಣಂ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಕೇರಳದ ವಿವಿಧ ನಗರಗಳಿಗೆ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಕೆಎಸ್ಆರ್ಟಿಸಿ ಹೆಚ್ಚುವರಿಯಾಗಿ 90 ವಿಶೇಷ ಬಸ್ಗಳನ್ನು ಕಾರ್ಯಾಚರಣೆಗೊಳಿಸಲಿದೆ.
ಈ ವಿಶೇಷ ಬಸ್ಗಳು ಕಣ್ಣೂರು, ಕೊಚ್ಚಿನ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್ ಮತ್ತು ತಿರುವನಂತಪುರಂ ಮಾರ್ಗಗಳಲ್ಲಿ ಸಂಚರಿಸಲಿದ್ದು, ವೋಲ್ವೋ ಮತ್ತು ಸ್ಲೀಪರ್ ಬಸ್ಗಳನ್ನು ನಿಯೋಜಿಸಲಾಗಿದೆ.
ಪ್ರಯಾಣಿಕರು ಕೆಎಸ್ಆರ್ಟಿಸಿಯ ಅಧಿಕೃತ ವೆಬ್ಸೈಟ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಪರಿಶೀಲಿಸಲು ಸಂಸ್ಥೆ ಕೋರಿದೆ.