
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಕಟ್ಟಡ ಅವಶೇಷಗಳನ್ನು ಎಲ್ಲೆಂದರಲ್ಲಿ ಸುರಿಯುವುದನ್ನು ತಡೆಯಲು ಹೊಸ ನಿಯಮ ಜಾರಿಗೆ ತಂದಿದ್ದು, ಇನ್ಮುಂದೆ ಡೆಮಾಲಿಷನ್ ಮಾಡುವವರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.
ಕಟ್ಟಡ ಅವಶೇಷಗಳ ವಿಲೇವಾರಿಗೆ ಪ್ರತಿ ಟನ್ಗೆ 760 ರೂ. ದರ ನಿಗದಿಪಡಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿ ಕಸ ವಿಲೇವಾರಿ ಮಾಡುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸುವುದು ಕಡ್ಡಾಯವಾಗಲಿದ್ದು, ಈ ಕುರಿತು ಪೊಲೀಸ್ ಮತ್ತು ಸಾರಿಗೆ ಇಲಾಖೆಯೊಂದಿಗೆ ಸಭೆ ನಡೆಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.