
ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಚೆನ್ನೈನಲ್ಲಿ ಒಲಿಂಪಿಕ್ ಸಿಟಿ ನಿರ್ಮಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಚಂದ್ರಶೇಖರ್ ಜೋಸೆಫ್ ವಿಜಯ್ ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಕ್ರೀಡಾ ಅಭಿವೃದ್ಧಿ ಇಲಾಖೆಗೆ ಕಳೆದ ತಿಂಗಳು 1,051 ಕೋಟಿ ರೂ. ಅನುದಾನ ನೀಡಲಾಗಿದ್ದು, ಇದು ಕಳೆದ ವರ್ಷದ 572 ಕೋಟಿ ರೂ.ಗಿಂತ ಎರಡು ಪಟ್ಟು ಹೆಚ್ಚಾಗಿದೆ.
ಮೋಟಾರ್ ಸ್ಪೋರ್ಟ್ಸ್ ಸಿಟಿಯನ್ನೂ ನಿರ್ಮಿಸಲಾಗುತ್ತಿದ್ದು, ಇಲ್ಲಿ ಫಾರ್ಮುಲಾ-1 ಸೇರಿದಂತೆ ಜಾಗತಿಕ ಮಟ್ಟದ ರೇಸಿಂಗ್ ಸ್ಪರ್ಧೆಗಳನ್ನು ಆಯೋಜಿಸಲು ಅಗತ್ಯವಿರುವ ಅತ್ಯಾಧುನಿಕ ಟ್ರ್ಯಾಕ್ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಲಾಗಿದೆ.