
ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (JPSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
1988ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಖಿಯಾಂಗ್ತೆ ಅವರನ್ನು ಜುಲೈ 28ರಿಂದ ನಾಲ್ಕು ಬಾರಿ ವಿಚಾರಣೆ ನಡೆಸಿದ ನಂತರ ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 20 ಜನರನ್ನು ಬಂಧಿಸಲಾಗಿದೆ.
ಹಗರಣದ ತನಿಖೆ ತೀವ್ರಗೊಂಡ ಬೆನ್ನಲ್ಲೇ ಜೆಪಿಎಸ್ಸಿಯ ಮೂವರು ಹಾಲಿ ಸದಸ್ಯರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ವಿದ್ಯಾರ್ಥಿಗಳು ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ.