
ಕಾವೇರಿ ಜಲ ವಿವಾದದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಂಗಳೂರು ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕ ಆಸ್ತಿಗೆ ಹಾನಿ ಅಥವಾ ಬಲವಂತದ ಬಂದ್ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಮಿಷನರ್ ಸೀಮಂತ್ ಕುಮಾರ್ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳಿಗೆ ಒಳಹರಿವು ಹೆಚ್ಚಿರುವ ಕಾರಣ, ಕರವೇ ಪ್ರವೀಣ್ ಶೆಟ್ಟಿ ಬಣವು ಬಂದ್ ನಿರ್ಧಾರವನ್ನು ಹಿಂಪಡೆದಿದ್ದು, ಬಹುತೇಕ ಸೇವೆಗಳು ಎಂದಿನಂತೆ ಮುಂದುವರಿಯಲಿವೆ.