
ಹಾವೇರಿ ಜಿಲ್ಲಾ ಪೊಲೀಸರು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 2 ಕೋಟಿ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ನಗದು ಮತ್ತು ವಾಹನಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.
ಪೊಲೀಸರು 46 ಪ್ರಕರಣಗಳಿಗೆ ಸಂಬಂಧಿಸಿದಂತೆ 1088 ಗ್ರಾಂ ಚಿನ್ನ (1.19 ಕೋಟಿ ರೂ.) ಮತ್ತು 35 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಂಡು ಮರಳಿಸಿದ್ದಾರೆ.
ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಮೊಬೈಲ್ಗಳನ್ನು ಪತ್ತೆ ಹಚ್ಚಿರುವ ಹಾವೇರಿ ಪೊಲೀಸರು, ಕಳ್ಳತನವಾಗಿದ್ದ 2527 ಮೊಬೈಲ್ಗಳ ಪೈಕಿ 2014 ಮೊಬೈಲ್ಗಳನ್ನು ಪತ್ತೆ ಮಾಡಿ 539 ಮೊಬೈಲ್ಗಳನ್ನು ಮಾಲೀಕರಿಗೆ ನೀಡಿದ್ದಾರೆ.