
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬೃಂದಾವಿಹಾರಿ’ ಸಿನಿಮಾ ಅಕ್ಟೋಬರ್ 16ರಂದು ದಸರಾ ಹಬ್ಬದ ವಿಶೇಷ ಕೊಡುಗೆಯಾಗಿ ಬಿಡುಗಡೆಯಾಗಲಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ವಿತರಣೆಯ ಜವಾಬ್ದಾರಿ ವಹಿಸಿಕೊಂಡಿದೆ.
ಈ ಚಿತ್ರವನ್ನು ಜಗತ್ತಿನಾದ್ಯಂತ 1,300ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಮಾಳವಿಕಾ ಶರ್ಮಾ ಮತ್ತು ದೇವಿಕಾ ಭಟ್ ನಾಯಕಿಯರಾಗಿ ನಟಿಸಿದ್ದಾರೆ.
ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಹಿರಿಯ ನಟಿ ಲಕ್ಷ್ಮಿ, ಅಶೋಕ್, ರಾಮ್ ಕುಮಾರ್ ಮತ್ತು ರಂಗಾಯಣ ರಘು ಸೇರಿದಂತೆ ದೊಡ್ಡ ಕಲಾವಿದರ ದಂಡೇ ಇದೆ.