
ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದ ಸಿಐಎಲ್ ಲ್ಯಾಬೊರೇಟರಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ವಿಕ್ರಂ ಸಿಂಗ್, ಸಂಜಯ್ ಸಿಂಗ್ ಮತ್ತು ಗಣೇಶ್ ಎಂದು ಗುರುತಿಸಲಾಗಿದ್ದು, ಅಸ್ವಸ್ಥಗೊಂಡಿರುವ ಶಿವಕುಮಾರ್ ಮತ್ತು ಹೇಮಂತ್ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಈ ದುರಂತ ಸಂಭವಿಸಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.