
ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ಮುಚ್ಚಿಸುವುದು ಸರ್ಕಾರದ ಉದ್ದೇಶವಲ್ಲ ಬದಲಾಗಿ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಗುರಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್ಲೈನ್ಗೆ ತರಲಾಗಿದ್ದು, ನಗರ ಪ್ರದೇಶಗಳಲ್ಲಿ ಶಿಥಿಲಗೊಂಡ ಕಟ್ಟಡಗಳ ಶಾಲೆಗಳಿಗೆ ಬೇರೆಡೆ ಸ್ಥಳಾಂತರಗೊಳ್ಳಲು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ಅವರು ತಿಳಿಸಿದರು.
ಬಡ ಮಕ್ಕಳಿಗೆ ಅನುಕೂಲವಾಗುವಂತೆ ಪ್ರತಿ ಗ್ರಾಮ ಪಂಚಾಯಿತಿಗೊಂದು ಸುಸಜ್ಜಿತ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು.