
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ತಗ್ಗು ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ಸೂಚನೆ ನೀಡಲಾಗಿದೆ.