
ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.