
ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಗುಜರಾತ್‌ನ ವಡೋದರಾ ಸಂಸದ ಡಾ. ಹೇಮಾಂಗ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ಆರು ವರ್ಷಗಳಿಂದ ಈ ಹುದ್ದೆಯಲ್ಲಿದ್ದ ಕರ್ನಾಟಕದ ತೇಜಸ್ವಿ ಸೂರ್ಯ ಅವರ ಸ್ಥಾನಕ್ಕೆ 35 ವರ್ಷದ ಹೇಮಾಂಗ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.
ಹೇಮಾಂಗ್ ಜೋಶಿ ಅವರು ಎಬಿವಿಪಿ ಹಿನ್ನೆಲೆಯಿಂದ ಬಂದವರಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ವಡೋದರಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.