
ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರು ವಂದೇ ಮಾತರಂ ಗೀತೆಯನ್ನು ರವೀಂದ್ರನಾಥ ಟ್ಯಾಗೋರ್ ಬರೆದಿದ್ದಾರೆ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.
ವಾಸ್ತವವಾಗಿ ವಂದೇ ಮಾತರಂ ಅನ್ನು ಬಂಕಿಮಚಂದ್ರ ಚಟ್ಟೋಪಾಧ್ಯಾಯರು ರಚಿಸಿದ್ದು, ಟ್ಯಾಗೋರ್ ಅವರು ಭಾರತದ ರಾಷ್ಟ್ರಗೀತೆ ಜನ ಗಣ ಮನ ರಚಿಸಿದವರು ಎಂಬ ಐತಿಹಾಸಿಕ ಸತ್ಯವನ್ನು ನೆಟ್ಟಿಗರು ನೆನಪಿಸಿದ್ದಾರೆ.
ಇದೇ ವೇಳೆ ಶ್ರೀರಾಮುಲು ಅವರು ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದ ವಿಚಾರವಾಗಿ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ನೆಹರು ಅವರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ.