
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಶೇ. 51.52 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಭಾರತ ತಂಡ ಫೈನಲ್ ತಲುಪಲು ಉಳಿದಿರುವ 7 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆಲ್ಲಬೇಕಿದೆ.
ನ್ಯೂಜಿಲೆಂಡ್ ವಿರುದ್ಧದ 2 ಟೆಸ್ಟ್ ಪಂದ್ಯಗಳನ್ನು ಕ್ಲೀನ್‌ಸ್ವೀಪ್ ಮಾಡುವುದು ಭಾರತಕ್ಕೆ ಅನಿವಾರ್ಯವಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಬೇಕಿದೆ.
ಭಾರತವು ನೇರವಾಗಿ ಫೈನಲ್ ಪ್ರವೇಶಿಸಲು ನ್ಯೂಜಿಲೆಂಡ್ ವಿರುದ್ಧ 2-0 ಮತ್ತು ಆಸ್ಟ್ರೇಲಿಯಾ ವಿರುದ್ಧ ಕನಿಷ್ಠ 3-1 ಅಂತರದಿಂದ ಸರಣಿ ಜಯಿಸಬೇಕಾದ ಸವಾಲು ಎದುರಾಗಿದೆ.