
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿದ್ದುಕೊಂಡು ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಮತ್ತು ನಾಗರಾಜ್, ತಮ್ಮ ಫಾರ್ಮ್ ಹೌಸ್ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಇರುವುದಕ್ಕೆ ಸಂಬಂಧಿಸಿದಂತೆ ಟಿ.ನರಸೀಪುರ ನ್ಯಾಯಾಲಯ ಹೊರಡಿಸಿರುವ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೂ ಅರ್ಜಿದಾರರಾಗಿದ್ದು, ಪ್ರಕರಣದ ತನಿಖಾಧಿಕಾರಿ ಮತ್ತು ಮೈಸೂರು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಅವರನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.
ತಮ್ಮ ಫಾರ್ಮ್ನಲ್ಲಿ ವಿವಿಧ ಜಾತಿಯ ಹಕ್ಕಿಗಳ ಜೊತೆಗೆ ಹೇಗೋ 4 ಪಟ್ಟೆ ತಲೆ ಹೆಬ್ಬಾತುಗಳು ಬಂದು ಸೇರಿಕೊಂಡಿವೆ, ನಾವು ಅವುಗಳನ್ನು ಸಾಕಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದ್ದು, ವನ್ಯಜೀವಿ ಕಾಯ್ದೆ ಅಡಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.