Entertainment
ತೋಟದ ಮನೆಯಲ್ಲಿ ಪಟ್ಟೆ ತಲೆ ಹೆಬ್ಬಾತುಗಳ ಪತ್ತೆ ಪ್ರಕರಣ: ಹೈಕೋರ್ಟ್‌ಗೆ ನಟ ದರ್ಶನ್

ತೋಟದ ಮನೆಯಲ್ಲಿ ಪಟ್ಟೆ ತಲೆ ಹೆಬ್ಬಾತುಗಳ ಪತ್ತೆ ಪ್ರಕರಣ: ಹೈಕೋರ್ಟ್‌ಗೆ ನಟ ದರ್ಶನ್

prajavani52m
THE BRIEF
1

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿದ್ದುಕೊಂಡು ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ ಮತ್ತು ನಾಗರಾಜ್, ತಮ್ಮ ಫಾರ್ಮ್‌ ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಇರುವುದಕ್ಕೆ ಸಂಬಂಧಿಸಿದಂತೆ ಟಿ.ನರಸೀಪುರ ನ್ಯಾಯಾಲಯ ಹೊರಡಿಸಿರುವ ಸಮನ್ಸ್‌ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

2

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರೂ ಅರ್ಜಿದಾರರಾಗಿದ್ದು, ಪ್ರಕರಣದ ತನಿಖಾಧಿಕಾರಿ ಮತ್ತು ಮೈಸೂರು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌) ಅವರನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.

3

ತಮ್ಮ ಫಾರ್ಮ್‌ನಲ್ಲಿ ವಿವಿಧ ಜಾತಿಯ ಹಕ್ಕಿಗಳ ಜೊತೆಗೆ ಹೇಗೋ 4 ಪಟ್ಟೆ ತಲೆ ಹೆಬ್ಬಾತುಗಳು ಬಂದು ಸೇರಿಕೊಂಡಿವೆ, ನಾವು ಅವುಗಳನ್ನು ಸಾಕಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದ್ದು, ವನ್ಯಜೀವಿ ಕಾಯ್ದೆ ಅಡಿ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.