
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಆಗಸ್ಟ್ 22ರ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸೌಂಡ್ ಬಾಕ್ಸ್ ಇಡಲು ಹಾಕಲಾಗಿದ್ದ ಕಬ್ಬಿಣದ ಪೈಪುಗಳಿಂದ ಸ್ಟ್ರಕ್ಚರ್ ಏರಿದ್ದ ವಿದ್ಯಾರ್ಥಿಗಳು ಕೆಳಗೆ ಬಿದ್ದು ಅವಘಡ ಸಂಭವಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಮಲ್ಲಾ ರೆಡ್ಡಿ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಮತ್ತು ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಅವಘಡದಲ್ಲಿ ಯಾವುದೇ ಜೀವ ಹಾನಿ ಆಗಿಲ್ಲವಾದರೂ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.