
ಕೊಪ್ಪಳ ಜಿಲ್ಲೆಯಲ್ಲಿ ಮೃತಪಟ್ಟ 7,085 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದುದನ್ನು ಪತ್ತೆ ಹಚ್ಚಿದ ಗ್ಯಾರಂಟಿ ಸಮಿತಿ, ಇದುವರೆಗೆ 86 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದೆ.
ಜಿಲ್ಲೆಯಲ್ಲಿ ಸುಮಾರು 26,000 ಮಲ್ಟಿಪಲ್ ಖಾತೆಗಳು ಪತ್ತೆಯಾಗಿದ್ದು, ಒಟ್ಟಾರೆ 2 ರಿಂದ 3 ಕೋಟಿ ರೂಪಾಯಿ ಅಕ್ರಮವಾಗಿ ಜಮೆಯಾಗಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹ ಅಕ್ರಮ ಬೆಳಕಿಗೆ ಬಂದಿದ್ದು, ಅಲ್ಲಿ ಮೃತ ಫಲಾನುಭವಿಗಳ ಖಾತೆಗೆ ಸುಮಾರು 22 ಕೋಟಿ ರೂಪಾಯಿ ಜಮೆಯಾಗಿರುವುದು ತನಿಖೆಯಲ್ಲಿ ಕಂಡುಬಂದಿದೆ.