
ಕರಾವಳಿ ಕರ್ನಾಟಕ, ಕೇರಳ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಈಶಾನ್ಯ ಮಾರುತಗಳು ಸಕ್ರಿಯವಾಗಿರುವುದರಿಂದ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಅಕ್ಟೋಬರ್ 20ರಂದು ತಮಿಳುನಾಡಿನ ಕೆಲವು ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಿಂದಾಗಿ ಚೆನ್ನೈನ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಅರ್ಕೋಣಂನಿಂದ ಎನ್ಡಿಆರ್ಎಫ್ ತಂಡವನ್ನು ರಕ್ಷಣಾ ಕಾರ್ಯಕ್ಕೆ ಕರೆಸಲಾಗಿದೆ.