
ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಮತ್ತು ಅಂಡರ್ಪಾಸ್ಗಳು ಜಲಾವೃತಗೊಂಡಿವೆ.
ಪೀಣ್ಯ ಮೇಲ್ಸೇತುವೆ ಹಾಗೂ ಹೆಬ್ಬಾಳ ರಿಂಗ್ ರಸ್ತೆಯಲ್ಲಿ ಮಳೆನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಜೋರು ಗಾಳಿ ಮತ್ತು ಮಳೆಗೆ ವಿಜ್ಞಾನ ನಗರ ಹಾಗೂ ವಿದ್ಯಾಸೌಧ ಬಳಿ ಬೃಹತ್ ಮರಗಳು ಧರೆಗುರುಳಿವೆ.