
ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಮುಂದಿನ 10 ದಿನಗಳ ಒಳಗಾಗಿ ರೈತರ ಖಾತೆಗೆ ಪರಿಹಾರದ ಹಣವನ್ನು ಜಮೆ ಮಾಡಲಾಗುವುದು ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಎಸ್‌ಡಿಆರ್‌ಎಫ್ ಅಡಿಯಲ್ಲಿ ಬರಬೇಕಾದ 1,200 ಕೋಟಿ ರೂಪಾಯಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಸಲ್ಲಿಸಿದೆ.
ಬೆಳೆ ನಷ್ಟದ ಅಂದಾಜು ವರದಿಯನ್ನು ಈ ತಿಂಗಳ ಕೊನೆಗೆ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.