
ಕೆಪಿಎಸ್ಸಿ ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ವೇಳೆ ಹುದ್ದೆ ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳು ವಿವಿಧ ಬ್ಯಾಂಕ್ ಖಾತೆಗಳ ಮೂಲಕ ₹92 ಲಕ್ಷ ಜಮೆ ಮಾಡಿರುವುದನ್ನು ಸಿಐಡಿ ತನಿಖಾ ತಂಡ ಪತ್ತೆ ಹಚ್ಚಿದೆ.
ಕೆಲವು ಅಭ್ಯರ್ಥಿಗಳು ಮಧ್ಯವರ್ತಿ ಬಸವರಾಜ ಕನ್ನಾಳೆ ಹಾಗೂ ಐಎಎಸ್ ಅಧಿಕಾರಿ ಘ್ಯಾನೇಂದ್ರ ಕುಮಾರ್ ಗಂಗ್ವಾರ್ಗೆ ₹60 ಲಕ್ಷವನ್ನು ನಗದು ರೂಪದಲ್ಲಿ ನೀಡಿದ್ದು, ಒಟ್ಟು ₹1.52 ಕೋಟಿ ಅಕ್ರಮ ನಡೆದಿರುವುದು ಬಯಲಾಗಿದೆ.
ಈ ಸಂಬಂಧ ಇದುವರೆಗೆ 40 ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸಿಐಡಿ ತನ್ನ ತನಿಖಾ ವರದಿಯನ್ನು ಸೋಮವಾರ ಸರ್ಕಾರಕ್ಕೆ ಸಲ್ಲಿಸಿದೆ.