
ಅಮೆರಿಕದ ಯುಜೀನ್‌ನಲ್ಲಿ ನಡೆಯುತ್ತಿರುವ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಆಶಿಷ್ ಯಾದವ್ 74.09 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ.
ದಕ್ಷಿಣ ಆಫ್ರಿಕಾದ ಜಾನ್-ಹೆಂಡ್ರಿಕ್ ಹೇಮನ್ಸ್ 80.50 ಮೀಟರ್ ದೂರ ಎಸೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರೆ, ಭಾರತದ ಮತ್ತೊಬ್ಬ ಸ್ಪರ್ಧಿ ಟಿ. ಧರಣಿಧರನ್ 72.35 ಮೀಟರ್ ಎಸೆದು ಆರನೇ ಸ್ಥಾನ ಪಡೆದರು.
19 ವರ್ಷದ ಆಶಿಷ್ ಯಾದವ್, 2016ರಲ್ಲಿ ಚಿನ್ನ ಗೆದ್ದಿದ್ದ ನೀರಜ್ ಚೋಪ್ರಾ ನಂತರ ಈ ಸ್ಪರ್ಧೆಯಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಅಥ್ಲೀಟ್ ಎನಿಸಿಕೊಂಡಿದ್ದಾರೆ.