
ದೊಡ್ಡಬಳ್ಳಾಪುರದ ಆತ್ರೇಯ ಆಯುರ್ವೇದಿಕ ಮಹಾವಿದ್ಯಾಲಯವು ಸಾಲ ಮರುಪಾವತಿಸದ ಕಾರಣ ಸಿಟಿ ಯೂನಿಯನ್ ಬ್ಯಾಂಕ್ನಿಂದ ಎರಡು ತಿಂಗಳ ಹಿಂದೆಯೇ ಸೀಜ್ ಆಗಿದ್ದು, ವಿದ್ಯಾರ್ಥಿಗಳು ತರಗತಿಗಳಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ.
ಆಡಳಿತ ಮಂಡಳಿಯು ಕಾಲೇಜು ಬಂದ್ ಆಗಿದ್ದರೂ ವಿದ್ಯಾರ್ಥಿಗಳಿಗೆ ಮುಂದಿನ ಕಂತಿನ ಶುಲ್ಕ ಪಾವತಿಸುವಂತೆ ನೋಟಿಸ್ ನೀಡಿದ್ದು, ಆನ್ಲೈನ್ ಮೂಲಕ ದಿನಕ್ಕೆ ಕೇವಲ ಒಂದು ಗಂಟೆ ಮಾತ್ರ ತರಗತಿ ನಡೆಸುತ್ತಿದೆ.
ನ್ಯಾಯಕ್ಕಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ದೊಡ್ಡಬಳ್ಳಾಪುರದಿಂದ ಜಿಲ್ಲಾಡಳಿತ ಭವನದವರೆಗೆ ಕಾಲ್ನಡಿಗೆ ಜಾಥಾ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.