
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಅವರ ಪತ್ನಿ ಅತ್ಯಾಚಾರ ಪ್ರಕರಣಗಳನ್ನು ಇತ್ಯರ್ಥಗೊಳಿಸಲು 5 ಕೋಟಿ ರೂಪಾಯಿ ಲಂಚ ಪಡೆಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಆರೋಪಿಸಿದ್ದಾರೆ.
ಗುರ್ವಿಂದರ್ ಸಿಂಗ್ ಚಹಾಲ್ ಎಂಬಾತನ ಪ್ರಕರಣವನ್ನು ಉಲ್ಲೇಖಿಸಿ ಬಿಜೆಪಿ ಆಡಿಯೋ ಕ್ಲಿಪ್ಗಳನ್ನು ಬಿಡುಗಡೆ ಮಾಡಿದ್ದು, ಸಿಎಂ ನಿವಾಸದಲ್ಲಿ ರಾಜಿ ದಂಧೆ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದೆ.
ಬಿಜೆಪಿಯ ಆರೋಪಗಳನ್ನು ಆಮ್ ಆದ್ಮಿ ಪಾರ್ಟಿ ತಳ್ಳಿಹಾಕಿದ್ದು, ಇದು ರಾಜಕೀಯ ದುರುದ್ದೇಶದಿಂದ ಕೂಡಿದ ಸುಳ್ಳು ಆರೋಪ ಎಂದು ತಿರುಗೇಟು ನೀಡಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.