
ಜಲಮೂಲಗಳಾದ ಕೆರೆ, ನದಿಗಳನ್ನು ತ್ಯಾಜ್ಯದಿಂದ ರಕ್ಷಿಸಲು ಮತ್ತು ಒತ್ತುವರಿ ತಡೆಯಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಯೋಜನೆ ರೂಪಿಸಬೇಕೆಂದು ಸಚಿವ ಈಶ್ವರ ಬಿ. ಖಂಡ್ರೆ ಆಗ್ರಹಿಸಿದ್ದಾರೆ.
ಜಲ ಜೀವನ ಮಿಷನ್ ಅಡಿಯಲ್ಲಿ ಕರ್ನಾಟಕದ 13,341 ಹಳ್ಳಿಗಳಲ್ಲಿ ಹರ್ ಘರ್ ಜಲ್ ವ್ಯವಸ್ಥೆ ಮಾಡಲಾಗಿದ್ದು, 1.01 ಕೋಟಿ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ.
ನೀರಿನ ಗುಣಮಟ್ಟ ಕಾಪಾಡಲು ರಾಜ್ಯದ 1.51 ಲಕ್ಷ ಮಹಿಳೆಯರಿಗೆ ತರಬೇತಿ ನೀಡಿ ಕ್ಷೇತ್ರೀಯ ಪರೀಕ್ಷಾ ಕಿಟ್ಗಳನ್ನು ವಿತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.