
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಶುಕ್ರವಾರ ಗಮನಾರ್ಹ ಕುಸಿತ ಕಂಡುಬಂದಿದ್ದು, ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಮ್‌ಗೆ ₹240ರಷ್ಟು ಇಳಿಕೆಯಾಗಿದೆ.
ಪ್ರಸ್ತುತ ಭಾರತದಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ ₹1,40,150 ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ₹1,52,890ಕ್ಕೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಇಳಿಕೆಯಾಗಿರುವುದು ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದ್ದು, ಬೆಳ್ಳಿ ದರವು 100 ಗ್ರಾಮ್‌ಗೆ ₹25,000 ಆಗಿದೆ.