
ತುಮಕೂರಿನ ರಂಗಸಮುದ್ರದ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ 8ನೇ ತರಗತಿ ಓದುತ್ತಿದ್ದ 14 ವರ್ಷದ ಪ್ರಿಯಾಂಕಾ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ, ಆಗಸ್ಟ್ 7ರಂದು ಹಾಸ್ಟೆಲ್‌ಗೆ ಮರಳಿದ್ದಳು ಮತ್ತು ಶನಿವಾರ ಮುಂಜಾನೆ ಶೌಚಾಲಯದಲ್ಲಿ ಕುಸಿದು ಬಿದ್ದಿದ್ದಾಳೆ.
ಘಟನೆಯ ನಂತರ ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪಾವಗಡದ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.