
ಐಐಟಿ ಮದ್ರಾಸ್ ಗೇಟ್-2027 ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 14ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಈ ಬಾರಿ ಪರೀಕ್ಷೆಯಲ್ಲಿ 'ರೋಬೋಟಿಕ್ಸ್ ಮತ್ತು ಆಟೋಮೇಷನ್' ವಿಷಯವನ್ನು ಹೊಸದಾಗಿ ಸೇರಿಸಲಾಗಿದ್ದು, ಒಟ್ಟು ವಿಷಯಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಪರೀಕ್ಷೆಗಳು 2027ರ ಫೆಬ್ರವರಿ 6, 7, 13, 14, 20 ಮತ್ತು 21ರಂದು ನಡೆಯಲಿದ್ದು, ಅಭ್ಯರ್ಥಿಗಳು ನೋಂದಣಿಗಾಗಿ ಡಿಜಿಲಾಕರ್ ಖಾತೆಯನ್ನು ಬಳಸುವುದು ಕಡ್ಡಾಯವಾಗಿದೆ.