
ಇರಾನ್ ಮೇಲಿನ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಜೊತೆಗಿನ ರಾಜತಾಂತ್ರಿಕ ಶಾಂತಿ ಮಾತುಕತೆಗಳನ್ನು ಆರಂಭಿಸುವುದಾಗಿ ದೃಢಪಡಿಸಿದ್ದಾರೆ.
ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಸೇರಿದಂತೆ ಗಲ್ಫ್ ನಾಯಕರ ಮನವಿಯ ಮೇರೆಗೆ ಯುದ್ಧದ ಬದಲು ಶಾಂತಿ ಒಪ್ಪಂದಕ್ಕೆ ಅಮೆರಿಕ ಆದ್ಯತೆ ನೀಡಿದೆ.
ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದು ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ತಡೆ ಒಡ್ಡುವುದು ಈ ಮಾತುಕತೆಯ ಮುಖ್ಯ ಪ್ರಸ್ತಾವನೆಗಳಾಗಿವೆ ಎಂದು ಟ್ರಂಪ್ ತಿಳಿಸಿದ್ದಾರೆ.