
ಬಿಸಿಲಿನಿಂದ ಕಂಗಾಲಾಗಿದ್ದ ರಾಯಚೂರು ಜಿಲ್ಲೆಯಾದ್ಯಂತ ಬುಧವಾರ ಸಂಜೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಯಚೂರು ನಗರ, ಮಾನ್ವಿ, ಲಿಂಗಸುಗೂರು, ದೇವದುರ್ಗ, ಸಿರವಾರ, ಸಿಂಧನೂರು ಸೇರಿ ಹಲವೆಡೆ ಕಳೆದ ಎರಡು ಗಂಟೆಯಿಂದ ಮಳೆಯಾಗಿದೆ.
ಯಾದಗಿರಿ, ಕಾರವಾರ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಿದ್ದು, ರೈತರು ಸಂತಸಗೊಂಡಿದ್ದಾರೆ.