
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸುತ್ತಲೇ, ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ಜಾತಿಗಣತಿ ವರದಿ ಜಾರಿಗೆ ಬಂದರೆ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಶೇಕಡಾ 75ರಷ್ಟು ಮೀಸಲಾತಿ ಸಿಗಬೇಕು ಎಂದು ಆಗ್ರಹಿಸಿದರು.
ಚುನಾವಣಾ ವ್ಯವಸ್ಥೆಯ ದುಬಾರಿ ವೆಚ್ಚದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಜಾತಿಗಣತಿ ವರದಿಯ ಮೇಲಿನ ಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸುವಂತೆ ಸೂಚನೆ ನೀಡಿದ್ದಾರೆ.