
ಶಿಕ್ಷಣ ಇಲಾಖೆಯಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚುವರಿಯಾಗಿ 2,500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮುದ್ರಣ ಇಲಾಖೆಯ ಬೇಡಿಕೆಯಂತೆ ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಪುಸ್ತಕಗಳ ಪ್ರತಿ ಪುಟದ ಮುದ್ರಣ ದರವನ್ನು 50 ಪೈಸೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನೊಂದಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿ ಜಿಲ್ಲೆಯಲ್ಲಿ ₹14 ಕೋಟಿ ವೆಚ್ಚದಲ್ಲಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ.