
ಬೆಂಗಳೂರಿನ ಬ್ಯಾಡರಹಳ್ಳಿ ಪ್ರದೇಶದಲ್ಲಿ ಕಳೆದ ಒಂದು ತಿಂಗಳಲ್ಲಿ ಐದನೇ ಬಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಜುಲೈ 29ರ ಮುಂಜಾನೆ 3:27ಕ್ಕೆ ಭಾರತ್ ನಗರದಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಿರಂತರವಾಗಿ ಚಿರತೆ ಓಡಾಟದಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದು, ಮಕ್ಕಳು ಮತ್ತು ವೃದ್ಧರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆಯು ಚಿರತೆಯನ್ನು ಹಿಡಿಯಲು ಬೋನ್ ಇಟ್ಟಿದ್ದರೂ, ಚಿರತೆ ಸಿಕ್ಕಿಬೀಳದೆ ಕೇವಲ ನಾಯಿಗಳು ಬೋನಿಗೆ ಬೀಳುತ್ತಿರುವುದು ನಿವಾಸಿಗಳ ಆತಂಕವನ್ನು ಹೆಚ್ಚಿಸಿದೆ.