
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯದಲ್ಲಿ 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 17 ಹೊಸ ಹಾಗೂ ಹೆಚ್ಚುವರಿ ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ.
ಈ ಯೋಜನೆಗಳಿಂದ ಒಟ್ಟು 66,360 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಹೀರೋ ಫ್ಯೂಚರ್ ಎನರ್ಜೀಸ್ 9,760 ಕೋಟಿ ರೂ. ಹಾಗೂ ವೈಬ್ರನ್ಸಿ ರೆನ್ಯೂಅಬಲ್ ಎನರ್ಜೀಸ್ 2,194.94 ಕೋಟಿ ರೂ. ಹೂಡಿಕೆ ಮಾಡುತ್ತಿವೆ.
ಯೋಜನೆಗಳಿಗೆ ಅನುಮತಿ ನೀಡುವ ಮುನ್ನ ಕಡ್ಡಾಯವಾಗಿ ಆಡಿಟ್ ನಡೆಸಲು ಹೊಸ ತಂಡ ರಚಿಸುವಂತೆ ಸಿಎಂ ಸೂಚಿಸಿದ್ದು, ಕೈಗಾರಿಕಾ ನೀತಿಯ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.