
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ (ಬಿಆರ್‌ಟಿ) ವ್ಯಾಪ್ತಿಯ ಕೋಳಿಹಟ್ಟಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 292 ಗಾಂಜಾ ಗಿಡಗಳನ್ನು ಅಬಕಾರಿ ಮತ್ತು ಅರಣ್ಯ ಇಲಾಖೆಗಳ ಜಂಟಿ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ ನಾಶಪಡಿಸಲಾಗಿದೆ.
ಸುಮಾರು 210 ಕೆಜಿ ತೂಕದ ಹಸಿ ಗಾಂಜಾವನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದ್ದು, ಇದರ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅರಣ್ಯದೊಳಗೆ ಇಷ್ಟು ಬೃಹತ್ ಪ್ರಮಾಣದ ಗಾಂಜಾ ಕೃಷಿ ನಡೆದಿರುವುದು ಅರಣ್ಯ ಇಲಾಖೆಯ ಸಿಬ್ಬಂದಿಯ ಸಹಕಾರವಿಲ್ಲದೆ ಸಾಧ್ಯವಿಲ್ಲ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.