
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶೇಷ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ್, ಸಚಿವರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಸರ್ಕಾರದ ಸಾಧನೆಗಳನ್ನು ಮೆಲುಕು ಹಾಕಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಡಿಕೆಶಿ ಮತ್ತು ಡಿಸಿಎಂ ಪರಮೇಶ್ವರ್ ಅವರು ವೇದಿಕೆಗೆ ಕರೆದೊಯ್ದಿದ್ದು ಸಮಾರಂಭದ ಪ್ರಮುಖ ಆಕರ್ಷಣೆಯಾಗಿತ್ತು.