
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಭೂಕಂಪನ ಉಂಟಾದ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸುತ್ತಮುತ್ತ ಲಘು ಭೂಕಂಪನ ಸಂಭವಿಸಿದೆ.
ಬೆಳಿಗ್ಗೆ 3.29ರ ಸಮಯದಲ್ಲಿ ಸೋಮೇನಹಳ್ಳಿ, ತರಿದಾಳು ಮತ್ತು ಅಲಿಪುರ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಅಧಿಕೃತ ಮಾಹಿತಿ ನೀಡಲಾಗಿದೆ.