
ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅವರೊಂದಿಗೆ ನಡೆದ ಸರ್ವಪಕ್ಷ ಸಭೆಯಿಂದ ಟಿವಿಕೆ ನೇತೃತ್ವದ ಮೈತ್ರಿಕೂಟ ಹಾಗೂ ಡಿಎಂಕೆ ಪ್ರತಿನಿಧಿಗಳು ಹೊರನಡೆದಿದ್ದಾರೆ.
ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ನಡೆದ ಅಕ್ರಮಗಳಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೇ ನೇರ ಹೊಣೆ ಎಂದು ಆರೋಪಿಸಿರುವ ಈ ಪಕ್ಷಗಳು, ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿವೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ತಮಿಳುನಾಡಿನಲ್ಲಿ ಸುಮಾರು 74 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ಕೈಬಿಡಲಾಗಿದೆ ಎಂದು ನಾಯಕರು ವಾಗ್ದಾಳಿ ನಡೆಸಿದ್ದಾರೆ.