
ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಬ್ಯಾಂಕ್‌ಗಳು ಕನ್ನಡಿಗರಿಗೆ ಕನ್ನಡದಲ್ಲೇ ಸೇವೆ ನೀಡಬೇಕು ಮತ್ತು ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ಸ್ಥಳೀಯ ಭಾಷೆ ಬಲ್ಲ ಅಧಿಕಾರಿಗಳನ್ನು ನೇಮಿಸುವ ಕ್ರಮವನ್ನು ಸ್ವಾಗತಿಸಿರುವ ಸಚಿವರು, ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಸೂಕ್ತ ನಿಯಮ ರೂಪಿಸಬೇಕೆಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಬರ ಘೋಷಣೆ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲವೆಂದು ಸ್ಪಷ್ಟಪಡಿಸಿದ ಸಚಿವರು, ಎರಡನೇ ಸುತ್ತಿನಲ್ಲಿ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.