
ಬೆಂಗಳೂರಿನ ಗೊಟ್ಟಿಗೆರೆ, ಲಿಂಗರಾಜಪುರ ಮತ್ತು ಸಿಂಗಸಂದ್ರದಲ್ಲಿರುವ ಇಂದಿರಾ ಕ್ಯಾಂಟೀನ್ ಅಡುಗೆ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿ ನಿಯಮ ಉಲ್ಲಂಘನೆಯನ್ನು ಪತ್ತೆ ಹಚ್ಚಿದೆ.
ಗೊಟ್ಟಿಗೆರೆ ಘಟಕದಲ್ಲಿ ಇಲಿ ಮತ್ತು ಹೆಗ್ಗಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ಸೀಲ್ ಮಾಡಲಾಗಿದ್ದು, ಮೂರು ಘಟಕಗಳಿಗೆ ನೋಟಿಸ್ ಜಾರಿ ಮಾಡಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಆಹಾರ ಪದಾರ್ಥಗಳ ಮಿಸ್ಬ್ರಾಂಡಿಂಗ್ ಮತ್ತು ಅಶುಚಿತ್ವದ ಆರೋಪದಡಿ ಈ ಪ್ರಕರಣಗಳನ್ನು ನ್ಯಾಯ ನಿರ್ಣಾಯಾಧಿಕಾರಿ ಮುಂದೆ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗಿದೆ.