
ವೈಕೆ ನಿರ್ದೇಶನದ ರೊಮ್ಯಾಂಟಿಕ್ ಸೈಕಾಲಜಿಕಲ್ ಥ್ರಿಲ್ಲರ್ ಶೈಲಿಯ ‘ಲಾರ್ಡ್ ಗಾಗ’ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಿದೆ.
‘ಝೀರೋ ಗ್ರ್ಯಾವಿಟಿ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಶೂನ್ಯ ನಾಯಕನಾಗಿ ಹಾಗೂ ಸ್ವರೂಪಿಣಿ ಮತ್ತು ದಿಶಾ ನಾಯಕಿಯರಾಗಿ ನಟಿಸಿದ್ದಾರೆ.
ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಸೇರಿದಂತೆ ಏಳಕ್ಕೂ ಅಧಿಕ ಭಾಷೆಗಳಲ್ಲಿ ಈ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಯೋಜಿಸಿದೆ.